ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್‌ಗೆ ಗೇಟ್ ಪಾಸ್

ಬೆಂಗಳೂರು : ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.

ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್‌ ಎಂದು ಸಿಎಂ ಆಪ್ತರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಕೇಂದ್ರ ಸಚಿವ ಎಚ್.​ ಡಿ. ಕುಮಾರಸ್ವಾಮಿ ಕೂಡ ಇದೇ ವಿಚಾರವಾಗಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜುಗೆ ಗೇಟ್ ಪಾಸ್ ನೀಡಲಾಗಿದೆ.

ಗೋವಿಂದರಾಜ್ ಜೂನ್‌ 1 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.





























































































































error: Content is protected !!
Scroll to Top