ಕಾರ್ಕಳ : ಕೊಳಕೆ ಇರ್ವತ್ತೂರು ಸ.ಹಿ.ಪ್ರಾ ಶಾಲೆಯಲ್ಲಿ ಎಲ್ಕೆಜಿ-ಯುಕೆಜಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಜೂ. 5ರಂದು ನಡೆಯಿತು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್ ಉದ್ಘಾಟಿಸಿದರು. ಶಾಲಾ ಹಳೆ ವಿದ್ಯಾರ್ಥಿ, ಕಂಬಳ ತೀರ್ಪುಗಾರ ಗುಣಪಾಲ ಕಡಂಬ, ಕೊಳಕೆ ಮನೆತನದ ಜಯಕೀರ್ತಿ ಕಡಂಬ, ಶಾಲಾ ಶತಮಾನೋತ್ಸವ ಸಮಿತಿಯ ಮುಂಬಯಿ ಘಟಕ ಅಧ್ಯಕ್ಷ ಸದಾನಂದ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ನಿವೃತ್ತ ಮುಖ್ಯ ಶಿಕ್ಷಕ ರಮನಾಥ ಶೆಣೈ, ಎಸ್ಡಿಎಂಸಿ ಅಧ್ಯಕ್ಷ ಮಧ್ವರಾಜ್, ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಉದಯ ಎಸ್. ಕೋಟ್ಯಾನ್, ಪಂಚಾಯತ್ ಸದಸ್ಯರಾದ ಶೇಖರ್ ಅಂಚನ್ ಮತ್ತು ಬಾಲಕೃಷ್ಣ ಶೆಟ್ಟಿ, ಶಿಕ್ಷಣ ಸಂಯೋಜಕ ಬಾಲಕೃಷ್ಣ ನಾಯಕ್, ರೋಟರಿ ರಾಕ್ ಸಿಟಿ ಅಧ್ಯಕ್ಷ ಉಪೇಂದ್ರ ವಾಗ್ಲೆ, ಜಿಲ್ಲಾ ಮಾಜಿ ಗವರ್ನರ್ ಡಾ. ಭರತೇಶ್, ಚಂದ್ರರಾಜ್ ಅತಿಕಾರಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ, ಸಿಆರ್ಪಿ ಉಮೇಶ್, ಯುವಕ ಮಂಡಲದ ಅಧ್ಯಕ್ಷ ರಾಜೇಂದ್ರ ಪೂಜಾರಿ, ಪ್ರಭಾರ ಮುಖ್ಯ ಶಿಕ್ಷಕಿ ಶಕುಂತಲಾ ರಾವ್ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಆನಂದ್ ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಅರುಣ್ ಕುಮಾರ್ ಶೇಟ್ ಕಾರ್ಯಕ್ರಮ ನಿರೂಪಿಸಿದರು.
ಕೊಳಕೆ ಇರ್ವತ್ತೂರು ಸ.ಹಿ.ಪ್ರಾ ಶಾಲೆಯಲ್ಲಿ ಎಲ್ಕೆಜಿ-ಯುಕೆಜಿ ತರಗತಿ ಪ್ರಾರಂಭ




























































