ಮಾಳ : ಅರಣ್ಯ ಇಲಾಖೆ ಮತ್ತು ಪಂಚಾಯತ್‌ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

ಕಾರ್ಕಳ : ಅರಣ್ಯ ಇಲಾಖೆ ಮತ್ತು ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳ ವಲಯ ಹಾಗೂ ಮಾಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಮಾಳ ಗ್ರಾಮ ಪಂಚಾಯತ್ ಪಿಡಿಒ ಶ್ರೀನಿವಾಸ್ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪ ವಲಯ ಅರಣ್ಯಾಧಿಕಾರಿ ಅಜಿತ್ ಕುಮಾರ್ ಅರಣ್ಯ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಉಪವಲಯ ಅರಣ್ಯ ಅಧಿಕಾರಿ ರಾಜು ಎಲ್.ಜೆ., ಅರಣ್ಯ ವೀಕ್ಷಕರಾದ ಗುರುರಾಜ್, ಉದಯ್ ಕುಮಾರ್, ದಾಮೋದರ್, ಮಾಳ ಶ್ರೀ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಗೀತಾ ಸೇರಿಗಾರ್, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶೋಭಾ ಸ್ವಾಗತಿಸಿ, ಜ್ಯೋತಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು





























































































































error: Content is protected !!
Scroll to Top