ಭುವನೇಂದ್ರ ರೆಸಿಡೆನ್ಷಿಯಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕಾರ್ಕಳ : ಮರ-ಗಿಡಗಳನ್ನು ಸಂರಕ್ಷಿಸಿದರೆ ಮುಂದಿನ ಪೀಳಿಗೆ ಜೀವಿಸಲು ಸಾಧ್ಯ. ವರ್ಷಕ್ಕೊಂದು ಗಿಡವನ್ನು ನೆಟ್ಟರೆ ಮುಂದಿನ ಪೀಳಿಗೆಗೆ ಒಂದು ಕೊಡುಗೆ ಆಗುತ್ತದೆ ಎಂದು ಕಾರ್ಕಳ ವಲಯಾರಣ್ಯಾಧಿಕಾರಿ ರವೀಂದ್ರ ಪಿ. ಆಚಾರ್ಯ ತಿಳಿಸಿದರು. ಅವರು ಜೂ. 5 ರಂದು ಜರುಗಿದ ವಿಶ್ವ ಪರಿಸರ ದಿನಾಚರಣೆಯಂದು ಭುವನೇಂದ್ರ ರೆಸಿಡೆನ್ಷಿಯಲ್ ಶಾಲೆಯ ವಿದ್ಯಾರ್ಥಿಗಳನ್ನುದ್ಧೇಶಿಸಿ ಮಾತನಾಡಿದರು.

ಶಾಲಾ ಪ್ರಾಂಶುಪಾಲೆ ಪ್ರಮೀಳಾ ಕೋಟ್ಯಾನ್ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿಗಳು ಪರಿಸರದ ಬಗ್ಗೆ ಭಾಷಣವನ್ನು ಹಾಗೂ ಪರಿಸರ ಗೀತೆಯನ್ನು ಹಾಡಿದರು. ವಿದ್ಯಾರ್ಥಿನಿ ಆದ್ಯ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಉಪ ಸಂರಕ್ಷಣಾ ಅಧಿಕಾರಿ ರವೀಂದ್ರ ಕುಮಾರ್, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳಾದ ಸುರೇಶ್ ಗಾಣಿಗ, ಪುಟ್ಟಣ್ಣ ಗೌಡ ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.































































