ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಸಭೆ

ಉಡುಪಿ : ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಜೂ. 7ರಂದು ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜು ಹಾಗೂ ಬ್ರಹ್ಮಾವರದ ಎಸ್‌ಎಂಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಬೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರ ಸಭೆ ನಡೆಯಿತು. ಈ ವೇಳೆ 2025-26ರ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರೀಯಾ ಯೋಜನೆ ತಯಾರಿಸಲಾಯಿತು. ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ತಯಾರಿಗಾಗಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಯಿತು.
ಪ್ರಾಂಶುಪಾಲರ ಸಂಘದ ಅಧ್ಯಕ್ಷ ದಿನೇಶ್ ಎಂ. ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಡಾ. ದಯಾನಂದ ಪೈ, ಖಜಾಂಚಿ ಸಂದೀಪ್ ಕುಮಾರ್, ಕ್ರೀಡಾ ಸಂಯೋಜಕ ಐವನ್ ದೋ ನತ್ ಡಿʼಸೋಜಾ ಹಾಗೂ ವಿವಿಧ ಕಾಲೇಜುಗಳ ವಿಜ್ಞಾನ ವಿಭಾಗದ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.















































































error: Content is protected !!
Scroll to Top