ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆಗೆ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿದೆ. ಮೇ 1ರಂದು ಬಜ್ಪೆಯಲ್ಲಿ ಬರ್ಬರವಾಗಿ ಸುಹಾಸ್‌ ಶೆಟ್ಟಿ ಹತ್ಯೆ ನಡೆದಿದ್ದು, ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ನೀಡುವಂತೆ ಬಿಜೆಪಿ, ಹಿಂದೂ ಪರ ಸಂಘಟನೆಗಳು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯೂ ನಡೆಯಿತು. ರಾಜ್ಯ ಬಿಜೆಪಿ ನಾಯಕರ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿಯನ್ನೂ ಸಲ್ಲಿಸಿತ್ತು. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 12 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎ‌ ವಹಿಸಿರುವುದನ್ನು ಸ್ವಾಗತಿಸಿದ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌, ಘಟನೆ ನಡೆದ ದಿನದಿಂದಲೂ ನಾವು ಈ ಬಗ್ಗೆ ಒತ್ತಾಯ ಮಾಡುತ್ತಲೇ ಇದ್ದೆವು. ಅದಕ್ಕೆ ತಕ್ಕಂತೆ ರಾಜ್ಯ ಸರಕಾರದ ತನಿಖಾ ವಿಧಾನವೂ ಏಕಪಕ್ಷೀಯವಾಗಿತ್ತು.‌ ಹಿಂದೂ ಕಾರ್ಯಕರ್ತರನ್ನು ವಿನಾಃ ಕಾರಣ ಗುರಿಯಾಗಿಸಿ ಎಫ್‌ಐಆರ್‌ ದಾಖಲಿಸುವುದು, ದ್ವೇಷದ ಗಡಿಪಾರು ಶಿಕ್ಷೆ ಇತ್ಯಾದಿ ಕ್ರಮಗಳನ್ನು ಸರಕಾರ ಕೈಗೊಂಡಿತ್ತು. ಮಂಗಳೂರಿಗೆ ಭೇಟಿ ನೀಡಿದ ಕಾಂಗ್ರೆಸ್‌ ನಾಯಕರು ಏಕಪಕ್ಷೀಯವಾಗಿ ಹಿಂದೂ ಸಂಘಟನೆಯ ಮೇಲೆ ಆರೋಪ ಹೊರಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಂತೂ ಸುಹಾಸ್‌ ಶೆಟ್ಟಿಯ ಮೇಲೆ ಆರೋಪ ಪಟ್ಟಿಯನ್ನೇ ಬಿಡುಗಡೆ ಮಾಡಿದ್ದರು. ಇದರಿಂದ ರಾಜ್ಯ ಸರಕಾರದ ತನಿಖೆಯಿಂದ ನ್ಯಾಯ ಸಿಗುವುದಿಲ್ಲ ಎಂಬುದು ಸ್ಪಷ್ಟವಾಗಿತ್ತು. ಇದೆಲ್ಲದಕ್ಕೂ ಎನ್‌ಐಎ ತನಿಖೆಯಿಂದ ಉತ್ತರ ಲಭಿಸಲಿದೆ ಎಂದು ಸುನಿಲ್‌ ಕುಮಾರ್‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ.















































































error: Content is protected !!
Scroll to Top