ಆರ್‌ಸಿಬಿ ಸನ್ಮಾನ ಕಾರ್ಯಕ್ರಮ ವಿರೋಧಿಸಿದ್ದ ವಿಧಾನಸೌಧದ ಭದ್ರತಾ ಮುಖ್ಯಸ್ಥರ ಪತ್ರ ವೈರಲ್!

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಯಾದ ಮೂರು ದಿನಗಳ ನಂತರ, ವಿಧಾನಸೌಧದ ಭದ್ರತಾ ಮುಖ್ಯಸ್ಥರು ಆರ್‌ಸಿಬಿ ಸನ್ಮಾನ ಕಾರ್ಯಕ್ರಮವನ್ನು ವಿರೋಧಿಸಿ ಬರೆದ ಪತ್ರ ಇದೀಗ ವೈರಲ್ ಆಗಿದೆ. ಜೂ. 4ರಂದು ಉಪ ಪೊಲೀಸ್ ಆಯುಕ್ತ ಎಂ.ಎನ್. ಕರಿಬಸವನ ಗೌಡ ಅವರು ಬರೆದ ಪತ್ರದಲ್ಲಿ, ಸಿಬ್ಬಂದಿ ಕೊರತೆ ಮತ್ತು ಜನಸಂದಣಿಯನ್ನು ನಿರ್ವಹಿಸುವಲ್ಲಿನ ಸವಾಲುಗಳ ಬಗ್ಗೆ ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರವನ್ನು ಉದ್ದೇಶಿಸಿ ಬರೆದ ಪತ್ರವು ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮಾಡುವ ಕಾರ್ಯಕ್ರಮ ನಡೆಸುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಮುಂಚಿತವಾಗಿ ಎಚ್ಚರಿಕೆ ನೀಡಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳ ವಿರೋಧದ ಹೊರತಾಗಿಯೂ, ಈ ಕಾರ್ಯಕ್ರಮವನ್ನು ನಡೆಸಲಾಯಿತು. ಇದರ ಪರಿಣಾಮವಾಗಿ ಇಬ್ಬರು ಅಪ್ರಾಪ್ತರು ಸೇರಿದಂತೆ 11 ಜನರು ಸಾವಿಗೀಡಾಗಿದ್ದರು ಮತ್ತು ಹಲವರು ಗಾಯಗೊಂಡರು.

ಹಿರಿಯ ಅಧಿಕಾರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಜಿ. ಸತ್ಯವತಿ ಮತ್ತು ಇತರ ಉನ್ನತ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಆರ್‌ಸಿಬಿಗೆ ದೇಶದಾದ್ಯಂತ ಅಭಿಮಾನಿಗಳಿದ್ದಾರೆ ಮತ್ತು ನಾವು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮವನ್ನು ಆಯೋಜಿಸಿದರೆ, ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ಸೇರಬಹುದು. ಭದ್ರತಾ ಸಿಬ್ಬಂದಿ ಕೊರತೆಯಿರುವುದರಿಂದ ಸರಿಯಾದ ಬಂದೋಬಸ್ತ್ ವ್ಯವಸ್ಥೆ ಮಾಡುವುದು ಸವಾಲಿನ ಕೆಲಸವಾಗಿರುತ್ತದೆ ಎಂದು ಬರೆದಿದ್ದಾರೆ.















































































error: Content is protected !!
Scroll to Top