ಟ್ರಕ್ಕಿಂಗ್ ವೇಳೆ ದಟ್ಟಾರಣ್ಯದಲ್ಲಿ ನಾಪತ್ತೆಯಾದ 10 ಮೆಡಿಕಲ್‌ ವಿದ್ಯಾರ್ಥಿಗಳು – ನಿರಂತರ 6 ಗಂಟೆಗಳ ಹುಡುಕಾಟದ ಬಳಿಕ ಪತ್ತೆ

ಚಿಕ್ಕಮಗಳೂರು : ಟ್ರಕ್ಕಿಂಗ್‌ಗೆ ಹೊರಟಿದ್ದ 11 ವಿದ್ಯಾರ್ಥಿಗಳು ಕಾಡಿನಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೂ ಪರದಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ನಡೆದಿದೆ.

ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ ಐವರು ಹುಡುಗರು ಮತ್ತು ಐವರು ಹುಡುಗಿಯರು ಹಾಗೂ ಡ್ರೈವರ್ ಸೇರಿ 11 ಜನ ಚಾರಣಕ್ಕೆ ಹೊರಟಿದ್ದರು. ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ದಾರಿ ತಪ್ಪಿ ಇಡೀ ಕಾಡು ಸುತ್ತಿ ವಿದ್ಯಾರ್ಥಿಗಳು ನಿತ್ರಾಣಗೊಂಡಿದ್ದರು. ವಿಷಯ ತಿಳಿದ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸರು ಸಂಜೆಯಿಂದ ಮಧ್ಯರಾತ್ರಿ 2 ಗಂಟೆವರೆಗೂ ಕಾಡಿನಲ್ಲಿ 11 ಮಂದಿಗಾಗಿ ಹುಡುಕಾಟ ನಡೆಸಿದ್ದಾರೆ. ಬಾಳೂರು ಪೊಲೀಸರ ಜೊತೆ ಮೂಡಿಗೆರೆ ಸ್ಥಳೀಯ ಯುವಕರು ಹುಡುಕಾಟಕ್ಕೆ ಕೈ ಜೋಡಿಸಿದ್ದರು. ನಿರಂತರ 6 ಗಂಟೆಗಳ ಹುಡುಕಾಟದ ಬಳಿಕ ಮಧ್ಯರಾತ್ರಿ 2 ಗಂಟೆಗೆ ಡ್ರೈವರ್ ಸೇರಿ 11 ಜನ ಸುರಕ್ಷಿತವಾಗಿ ಸಿಕ್ಕಿದ್ದಾರೆ.



































































































error: Content is protected !!
Scroll to Top