ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

ಉಡುಪಿ : ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/buspassservices ನಲ್ಲಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅಥವಾ ಕರ್ನಾಟಕ -ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್‌ಪಾಸ್‌ಗಾಗಿ ಅರ್ಜಿ ಸಲ್ಲಿಸಲು ಡಿಕ್ಲರೇಷನ್ ಫಾರ್ಮ್ ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕ.ರಾ.ರ.ಸಾ.ನಿಗಮದ ವೆಬ್‌ಸೈಟ್ https://ksrtc.karnataka.gov.in/studentpass ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಫಾರ್ಮ್ ಅನ್ನು ಭರ್ತಿ ಮಾಡಿ ಶಾಲಾ ಮುಖ್ಯಶಿಕ್ಷಕರ ಅಥವಾ ಕಾಲೇಜು ಪ್ರಾಂಶುಪಾಲ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡಬೇಕೆಂದು ಮಂಗಳೂರು ಕ.ರಾ.ರ.ಸಾ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸ್ ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮುಖೇನ ಕಳುಹಿಸಲಾಗುವುದು.‌ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.

ರಾಜ್ಯ ಸರಕಾರವು ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ್ದು, ನೆರೆರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸು ಪಡೆಯುವ ಅಗತ್ಯವಿದೆ.‌ ಕ.ರಾ.ರ.ಸಾ.ನಿಗಮ ವ್ಯಾಪ್ತಿಯ ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ.



































































































error: Content is protected !!
Scroll to Top