ಕಾರ್ಕಳ : ಕಾರ್ಕಳ-ಪಡುಬಿದ್ರೆ ಹೆದ್ದಾರಿಯಲ್ಲಿ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನಪ್ಪಿರುವ ದುರ್ಘಟನೆ ಜೂ. 12ರ ಬೆಳಿಗ್ಗೆ ನಡೆದಿದೆ.
ಕಾರ್ಕಳದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಡ್ವೆ ಕಾಂಜಾರಕಟ್ಟೆ ಜಂಕ್ಷನ್ ಬಳಿ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ರಿಕ್ಷಾದಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುತ್ತಾರೆ. ತಕ್ಷಣವೇ ಸ್ಥಳೀಯರು ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಅಪಘಾತದ ಭೀಕರತೆಗೆ ಎರಡೂ ವಾಹನದ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಕಾರ್ಕಳ – ಪಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು






























































