ಅಹಮದಾಬಾದ್​ನಲ್ಲಿ ಏರ್ ಇಂಡಿಯಾ ವಿಮಾನ ಪತನ

ಅಹ್ಮದಾಬಾದ್ : ಗುಜರಾತ್ ರಾಜಧಾನಿ ಅಹಮದಾಬಾದ್‌ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ಟೇಕ್ ಆಫ್ ಆದ ಕೂಡಲೆ ವಿಮಾನ ಪತನವಾಗಿದೆ ಎಂದು ತಿಳಿದು ಬಂದಿದೆ. ಪರಿಣಾಮವಾಗಿ ನಿಲ್ದಾಣದ ಸುತ್ತಲೂ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.

ಇಂದು ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಅಹಮದಾಬಾದ್​ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣೆ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ.





























































































































error: Content is protected !!
Scroll to Top