ಹೆಬ್ರಿ : ಬಸ್‌ ಡಿಕ್ಕಿ – ಪಾದಚಾರಿ ಸಾವು

ಹೆಬ್ರಿ : ಬಸ್‌ ಡಿಕ್ಕಿಯಾಗಿ ಪಾದಚಾರಿಯೋರ್ವರು ಸಾವನಪ್ಪಿದ ಘಟನೆ ಜೂ. 11ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಶೋಬಿತ್‌ KA-14-B-4118) ಬಸ್ ಹೆಬ್ರಿ ಜಂಕ್ಷನ್‌ ಕಡೆಯಿಂದ ಪುಟ್‌ ಪಾತ್‌ನಲ್ಲಿ ನಡೆದುಕೊಂಡು ಬರುತ್ತಿದ್ದ ಶಂಕರ (71) ಎಂಬವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಶಂಕರ ಅವರು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ಹೆಬ್ರಿ ಹೆಲ್ತ್‌ ಕೇರ್‌ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಚಿಕಿತ್ಸೆಗೆ ಸ್ಪಂದಿಸದೆ ಶಂಕರ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































































error: Content is protected !!
Scroll to Top