ಕಾರ್ಕಳ ಮೈನ್ ಶಾಲೆ : ಉಚಿತ ನೋಟ್ ಪುಸ್ತಕ ವಿತರಣೆ

ಕಾರ್ಕಳ : ಕಾರ್ಕಳ ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ. 12ರಂದು ನಿಟ್ಟೆ ಎಜುಕೇಷನ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ನಿಟ್ಟೆ ಇವರಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣೆ ಮಾಡಲಾಯಿತು. ಪುರಸಭಾ ಸದಸ್ಯೆ ಸುಮಾ ಕೇಶವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಾಲಾಶ್ರೀ, ಸಹ ಶಿಕ್ಷಕ ಶಿವಾನಂದ, ಅತಿಥಿ ಶಿಕ್ಷಕಿ ವಾಣಿ, ಗೌರವ ಶಿಕ್ಷಕಿ ಅಶ್ವಿನಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಶಿಕಲಾ ಸ್ವಾಗತಿಸಿ, ಪದವೀಧರ ಸಹ ಶಿಕ್ಷಕಿ ಪ್ರತಿಮಾ ಎಸ್. ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಮಧುಶ್ರೀ ವಂದಿಸಿದರು.







error: Content is protected !!
Scroll to Top