ಕಾರ್ಕಳ : ಮಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ಒಕ್ಕೂಟದ ಮಹಾಸಭೆ ಜೂ. 13 ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷೆ ಚಿತ್ರಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಭೆಯಲ್ಲಿ ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸೊಳ್ಳೆಗಳಿಂದ ಹರಡುವ ರೋಗಗಳ ಕುರಿತು ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಪೂಜಾರಿ ಮಾತನಾಡಿ, ಪಂಚಾಯತಿಯಿಂದ ಗ್ರಾಮದ ಜನತೆಗೆ ಸಿಗುವ ಸವಲತ್ತುಗಳನ್ನು ತಲುಪಿಸುವಲ್ಲಿ ಎಲ್ಲರೂ ಜೊತೆಯಾಗಿ ಕಾರ್ಯನಿರ್ವಹಿಸೋಣ ಎಂದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ. ಬಿ. ಕೆ. ವಾರ್ಷಿಕ ವರದಿ ಮಂಡಿಸಿದರು. ಎಲ್‌ಸಿಆರ್‌ಪಿ ಸುಮತಿ ಸ್ವಾಗತಿಸಿ, ಕೃಷಿ ಸಖಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು. ಎಲ್‌ಸಿಆರ್‌ಪಿ ಮಲ್ಲಿಕಾ ವಂದಿಸಿದರು.
ಮಾಳ : ಕಿತ್ತೂರು ರಾಣಿ ಚೆನ್ನಮ್ಮ ಒಕ್ಕೂಟದ ಮಹಾಸಭೆ





