ಅಂತರಾಷ್ಟ್ರೀಯ ಯೋಗ ಸ್ಪರ್ಧೆ : ಆಳ್ವಾಸ್ ಯೋಗಪಟುಗಳಿಗೆ ಎಂಟು ಚಿನ್ನ – ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ : ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ ಎಂಟು ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ ಎಂಟು ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು, ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು.

ಸಬ್‌ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ – ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ – ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ – ಕಲಾತ್ಮಕ ಯೋಗಾಸನ, ಪೃಥ್ವಿಚಾರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು.

ಜ್ಯೂನಿಯರ್ ಹುಡುಗಿಯರ ವಿಭಾಗದಲ್ಲಿ ಹಿಮಜ – ಸಾಂಪ್ರದಾಯಿಕ ಯೋಗಾಸನ, ಅನನ್ಯ ಗುರವ್ – ಕಲಾತ್ಮಕ ಯೋಗಾಸನದಲ್ಲಿ ಚಿನ್ನ, ಸೀನಿಯರ್ ಹುಡುಗಿಯರ ವಿಭಾಗದಲ್ಲಿ ನಿರ್ಮಲ ಸುಭಾಷ್ ಕೊಡ್ಲಿಕರ್ – ಸಾಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆಯುವುದರ ಮೂಲಕ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದರು. ಪದಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.









































































































error: Content is protected !!
Scroll to Top