ನಿಟ್ಟೆ : ಓವರ್‌ ಟೇಕ್‌ ಮಾಡುವ ಭರದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಮತ್ತು ಬೈಕ್‌ಗೆ ಕಾರು ಡಿಕ್ಕಿ – ಅಪಘಾತ ಮಾಡಿದವ ವಾಹನ ಸಮೇತ ಪರಾರಿ

ಕಾರ್ಕಳ : ಓವರ್‌ ಟೇಕ್‌ ಮಾಡುವ ಭರದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಮತ್ತು ಅದೇ ದಾರಿಯಲ್ಲಿ ಸಾಗುತ್ತಿದ್ದ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಗಾಯಾಳುಗಳನ್ನು ಉಪಚರಿಸದೆ ಕಾರು ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾದ ಘಟನೆ ಜೂ. 14ರಂದು ನಿಟ್ಟೆಯಲ್ಲಿ ಸಂಭವಿಸಿದೆ.

ದೂಪದಕಟ್ಟೆ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಹಾದು ಹೋಗುವ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ (KA-19-MN-1816) ಕಾರು ಅದೇ ದಾರಿಯಲ್ಲಿ ಸಾಗುತ್ತಿದ್ದ ಬೈಕೊಂದನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ರಸ್ತೆ ದಾಟುತ್ತಿದ್ದ ಅಮ್ಮು ಎಂಬವರಿಗೆ ಢಿಕ್ಕಿ ಹೊಡೆದಿದೆ. ಅಲ್ಲದೆ ಇದೇ ವೇಳೆ ಚಾಲಕನು ಕಾರನ್ನು ತೀರಾ ಎಡಗಡೆಗೆ ಚಲಾಯಿಸಿದ್ದರಿಂದ ಗೌತಮ್ ಎಂಬವರು ಛಾಯಾ ಎಂಬವರನ್ನು ಸಹಸವಾರೆಯನ್ನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಸವಾರ ಮತ್ತು ಸಹಸವಾರೆ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಅಮ್ಮು, ಬೈಕ್‌ ಸವಾರ ಗೌತಮ್, ಸಹ ಸವಾರೆ ಛಾಯ ಗಾಯಗೊಂಡಿದ್ದಾರೆ. ಆದರೆ, ಅಪಘಾತಕ್ಕೆ ಕಾರಣನಾದ ಕಾರು ಚಾಲಕನು ಗಾಯಾಳುಗಳನ್ನು ಉಪಚರಿಸದೆ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿರುತ್ತದೆ.





























































































































error: Content is protected !!
Scroll to Top