ಕಾರ್ಕಳ : ನಾಲ್ಕೂರು ನರಸಿಂಗರಾವ್ ಸ್ಮಾರಕ ಸರಕಾರಿ ಪದವಿ ಪೂರ್ವ ಕಾಲೇಜು ಶಿರ್ಲಾಲು ಪ್ರೌಡಶಾಲಾ ವಿಭಾಗ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಅಜೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್, ಶಾಲಾ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಕೆ. ಗುಣಪಾಲ ಕಡಂಬ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಂತಿರಾಜ್ ಜೈನ್ ಅವರಿಂದ ಕೊಡಮಾಡಲ್ಪಟ್ಟ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ಶಾಲಾ ಸಭಾಂಗಣದಲ್ಲಿ ಜರುಗಿತು.
ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಕೆ. ಗುಣಪಾಲ ಕಡಂಬ, ಅಜೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶಾಂತಿರಾಜ್ ಜೈನ್, ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರಮತಾ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮಾನಂದ ನಾಯಕ್ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲ ಬೇಬಿ ಕೆ. ಈಶ್ವರ ಮಂಗಲ ಸ್ವಾಗತಿಸಿ, ಶಿಕ್ಷಕ ನಾರಾಯಣ ಪೂಜಾರಿ ಎನ್, ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ನರಸಿಂಹ ನಾಯಕ್ ವಂದಿಸಿದರು.






























































