ಮೂಡಬಿದಿರೆ : ಕಲ್ಲಬೆಟ್ಟು ಮೂಡುಬಿದಿರೆ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21ರಂದು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.
ಸಂಸ್ಥೆಯಲ್ಲಿ ಬೆಳಗ್ಗೆ ಒಂದು ಗಂಟೆಗಳ ಕಾಲ ಆಯುಷ್ ಮಂತ್ರಾಲಯ ಸೂಚಿಸಿದ ಸಾಮಾನ್ಯ ಯೋಗಾಭ್ಯಾಸ ಕ್ರಮವನ್ನು ವಿದ್ಯಾರ್ಥಿಗಳು ಅನುಸರಿಸಿದರು. ಡಾ . ವೃಂದಾ ಬೆಡೇಕರ್ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯೋಗಾಸನದ ಮಹತ್ವವನ್ನು ತಿಳಿ ಹೇಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟಿಗಳಾದ ಮಹಮ್ಮದ್ ಭಾಷಾ, ಚಂದ್ರಶೇಖರ್ ರಾಜೇ ಅರಸ್, ಯೋಗೇಶ್ ಬೆಡೇಕರ್, ಸುಭಾಶ್ ಝಾ, ಡಾ. ಎಸ್. ಎನ್. ವೆಂಕಟೇಶ್ ನಾಯಕ್, ಶರತ್ ಗೋರೆ ಉಪಸ್ಥಿತರಿದ್ದರು.



























































