ಕಾರ್ಕಳ ತಾಲೂಕು ಬಿಜೆಪಿ ಮಂಡಲ – ಮಹಿಳಾ ಮೋರ್ಚಾ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕಾರ್ಕಳ : ಕಾರ್ಕಳ ತಾಲೂಕು ಬಿಜೆಪಿ ಮಂಡಲ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಸಹಯೋಗದಲ್ಲಿ ಜೂ. 21ರಂದು ಬಂಡಿಮಠ ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರ ಸೇವಿಕಾ ಸಮಿತಿ ಕಾರ್ಕಳ ತಾಲೂಕು ಕಾರ್ಯನಿರ್ವಾಹಕಿ ಶಶಿಕಲ ಮಣಿಯಾಣಿ ಭಾರತಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪತಂಜಲಿ ಯೋಗ ಸಂಸ್ಥಾನದ ಉದಯ ಕಡಂಬ ಯೋಗಾಸವನ್ನು ಮಾಡಿಸಿದರು. ಬಳಿಕ ಪ್ರತಿನಿತ್ಯ ಯೋಗ ಮಾಡುವುದರಿಂದಾಗುವ ಪ್ರಯೋಜನಗಳ ಬಗ್ಗೆ ತಿಳಿಸಿದ ಅವರ ಮನುಷ್ಯನ ದೈಹಿಕ ಮತ್ತು ಮಾನಸಿಕ ಸದೃಢತೆ ಯೋಗಾಭ್ಯಾಸ ಅವಶ್ಯ ಎಂದರು.

ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್‌ ಶೆಟ್ಟಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಕಾರ್ಯದರ್ಶಿ ಕವಿತಾ ಹರೀಶ್‌, ಕಾರ್ಕಳ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿನಯಾ ಡಿ. ಬಂಗೇರ, ಪ್ರಧಾನ ಕಾರ್ಯದರ್ಶಿ ವಿನುತಾ ಆಚಾರ್ಯ, ಸುಚಿತ್ರಾ ಶೆಟ್ಟಿ, ಕೋಶಾಧಿಕಾರಿ ಸುಮಾ ರವಿಕಾಂತ್‌, ನಗರಾಧ್ಯಕ್ಷ ನಿರಂಜನ್‌ ಜೈನ್,‌ ಕಾರ್ಯದರ್ಶಿ ವಿಘ್ನೇಶ್‌ ರಾವ್‌, ಪ್ರಮುಖರಾದ ರವೀಂದ್ರ ಕುಮಾರ್‌, ಆನಂದರಾಯ್‌ ನಾಯಕ್‌, ಕಾರ್ಯಾಲಯ ಕಾರ್ಯದರ್ಶಿ ಜ್ಯೋತಿ ರಮೇಶ್‌ ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಳು ಭಾಗಿಯಾಗಿದ್ದರು.









































































































error: Content is protected !!
Scroll to Top