ಜೂ. 28 : ಜ್ಞಾನಸುಧಾದಲ್ಲಿ ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ಮೌಲ್ಯಸುಧಾ

ಕಾರ್ಕಳ : ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ನ ಸಹಯೋಗದಲ್ಲಿ ನಡೆಯುವ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾದ ಮಾಲಿಕೆ-37 ಜೂ. 28ರಂದು ಸಂಜೆ 6 ಗಂಟೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ತುಮಕೂರು ರಾಮಕೃಷ್ಣ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ಭಾಗವಹಿಸಲಿದ್ದು, ‘ಸ್ವನಿಯಂತ್ರಣ : ಬಂಧನವೋ? ಸ್ವಾತಂತ್ರ್ಯವೋ?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸ ಬಹುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.







































error: Content is protected !!
Scroll to Top