ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ – ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಮಾಹಿತಿ ಕಾರ್ಯಕ್ರಮ

ಕಾರ್ಕಳ : ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ವತಿಯಿಂದ ನಿಟ್ಟೆ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ಜೂ. 26ರಂದು ನಿಟ್ಟೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಎಎಸ್‌ಪಿ ಡಾ. ಹರ್ಷಪ್ರಿಯಂವದ ಅವರು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸಿದರು.

ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ ನಡೆಸಿ ವಿಜೇತರಿಗೆ ಪ್ರಶಂಶನ ಪತ್ರ ವಿತರಿಸಲಾಯಿತು. ನಂತರ ಎಎಸ್‌ಎಪಿ ಅವರ ನೇತೃತ್ವದಲ್ಲಿ ಸುಮಾರು 600 ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳ ಜೊತೆ ಮಾದಕ ವಸ್ತು ವಿರೋಧಿ ಜಾಥಾ ನಡೆಯಿತು. ಕಾರ್ಕಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್.‌ ಮತ್ತು ಸುಂದರ ಹಾಗೂ ನಿಟ್ಟೆ ಸಂಸ್ಥೆಯ ಯೋಗೇಶ್ ಹೆಗ್ಡೆ ಉಪಸ್ಥಿತರಿದ್ದರು.









































































































error: Content is protected !!
Scroll to Top