ಬಳ್ಳಾರಿ : ಬಳ್ಳಾರಿಯಲ್ಲಿ ಡಿಸೆಂಬರ್ನಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರು ಆಯ್ಕೆಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ನಾಡು, ನುಡಿಯ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದು, ಕನ್ನಡ ಭಾಷೆಯ ಸಾಮರ್ಥ್ಯ ಹಾಗೂ ಶಕ್ತಿಯನ್ನು ಜಗತ್ತಿಗೆ ತೋರಿಸಿ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೆ ಹೊಸ ಅರ್ಥ ತಂದವರು ಬಾನು ಮುಷ್ತಾಕ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


































