ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ

ಮಂಡ್ಯ : ಸಿಎಂ ಸಿದ್ದರಾಮಯ್ಯ ಇಂದು ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌)ಕ್ಕೆ ಬಾಗಿನ ಅರ್ಪಿಸಿದ್ದಾರೆ. ಕೆಆರ್‌ಎಸ್‌ನ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಇದೇ ಮೊದಲ ಬಾರಿಗೆ ಡ್ಯಾಂ ನಿರ್ಮಾಣವಾದ ಬಳಿಕ ಜೂನ್‌ ತಿಂಗಳಿನಲ್ಲಿ ಭರ್ತಿಯಾಗಿದೆ.

ದೇವರಾಜ ಅರಸು ಕಾಲದಲ್ಲಿ 1979 ರಿಂದ ಬಾಗಿನ ಅರ್ಪಿಸುವ ಕಾರ್ಯಕ್ರಮ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ಜೂನ್ ತಿಂಗಳಲ್ಲಿ ಯಾರು ಬಾಗಿನ ಸಲ್ಲಿಸಿಲ್ಲ. ಹೀಗಾಗಿ ಜೂನ್‌ ತಿಂಗಳಿನಲ್ಲೇ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 4ನೇ ಬಾರಿ ಕೆಆರ್‌ಎಸ್‌ಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದಾರೆ.

ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯಿತು. ಕಾರ್ಯಕ್ರಮದ ಹಿನ್ನೆಲೆ ಕನ್ನಡ ಬಾವುಟದಿಂದ ಕನ್ನಂಬಾಡಿ ಕಟ್ಟೆಯನ್ನು ಶೃಂಗರಿಸಲಾಗಿತ್ತು. ಮೈಸೂರಿನ ಸರಕಾರಿ ಅತಿಥಿ ಗೃಹದಿಂದ ಬಸ್ಸಿನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವ ಸಂಪುಟ ಸದಸ್ಯರು ಒಂದೇ ಬಸ್ ನಲ್ಲಿ ಪ್ರಯಾಣಿಸಿ ಕೆಆರ್‌ಎಸ್‌ಗೆ ಆಗಮಿಸಿದರು. ಸಿಎಂ ಜೊತೆಗೆ ಕಾವೇರಿ ಮಾತೆಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಬಾಗಿನ ಅರ್ಪಿಸಿದರು.









































































































error: Content is protected !!
Scroll to Top