ಸಾಣೂರು ಯುವಕ ಮಂಡಲ – ವಿದ್ಯಾರ್ಥಿಗಳಿಗೆ ಅಭಿನಂದನೆ

ಕಾರ್ಕಳ : ಸಾಣೂರು ಯುವಕ ಮಂಡಲದ ವತಿಯಿಂದ 2024-25ನೇ ಸಾಲಿನಲ್ಲಿ 90% ಕ್ಕಿಂತ ಅಧಿಕ ಅಂಕ ಪಡೆದ ಸಾಣೂರು ಗ್ರಾಮದ ಹಾಗೂ ಸಾಣೂರು ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೂ. 29ರಂದು ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸುಚೇತ ಕಾಮತ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಜೇಸಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ ಮಾತನಾಡಿ, ಸಾಣೂರಿನ ಸರಕಾರಿ ಶಾಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ದಾಖಲಿಸಿರುವುದು ಸಂತಸದಾಯಕ. ಇಂತಹ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಗೌರವಿಸುತ್ತಿರುವ ಯುವಕ ಮಂಡಲದ ಕಾರ್ಯವೈಖರಿ ಶ್ಲಾಘನೀಯ ಎಂದರು.
ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಲವೀನಾ ಮೇಲ್ವಿಟಾ ನೋರೋನ್ಹ ಮಾತನಾಡಿ, ಗ್ರಾಮದ ಸರ್ವೋತೋಮುಖ ಪ್ರಗತಿಗೆ ಸಹಕರಿಸುತ್ತಿರುವ ಯುವಕ ಮಂಡಲದ ಕಾರ್ಯಚಟುವಟಿಕೆ ಸಮಾಜಕ್ಕೆ ಮಾದರಿ ಎಂದು ಹೇಳಿದರು.

ಅಭಿನಂದನೆ
ಎಸ್ಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಪಡೆದ 36 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮಂಡಲ ಕಾರ್ಯದರ್ಶಿ ಪ್ರಕಾಶ್ ರಾವ್ ಅಭಿನಂದನಾ ಪಟ್ಟಿ ವಾಚಿಸಿದರು. ಇದೇ ಸಂದರ್ಭ ಜಯಕರ್ನಾಟಕ ಜನಪರ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಸಾಣೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುದ್ದಣ್ಣ ನಗರದ ಶಿಕ್ಷಕಿ ಗೀತಾ ಅವರನ್ನು ಸನ್ಮಾನಿಸಲಾಯಿತು. ಮಂಡಲದ ಜೊತೆ ಕಾರ್ಯದರ್ಶಿ ಪ್ರಮಿತ್ ಸುವರ್ಣ ಸನ್ಮಾನ ಪತ್ರ ವಾಚಿಸಿದರು.

ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಮಹೇಶ್ ಕುಮಾರ್, ಶಂಕರ್ ಶೆಟ್ಟಿ, ದೇವಾನಂದ ಶೆಟ್ಟಿ, ಪ್ರಕಾಶ್ ಮಡಿವಾಳ, ಜಗದೀಶ್ ಕುಮಾರ್,
ಮಂಡಲದ ಕೋಶಾಧಿಕಾರಿ ಶುಭಕರ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಶ್ ಪೂಜಾರಿ, ಕ್ರೀಡಾ ಕಾರ್ಯದರ್ಶಿ ವಿದ್ಯಾನಂದ ಕೋಟ್ಯಾನ್ ಮತ್ತು ಪ್ರವೀಣ್ ಶೆಟ್ಟಿ, ಸದಸ್ಯರಾದ ಮರಳಿಧರ ಸುವರ್ಣ, ಪ್ರಭಾಕರ್ ಶೆಟ್ಟಿ, ಜಿತೇಶ್ ರಾವ್, ವಿಘ್ನೇಶ್ ರಾವ್, ಸುದರ್ಶನ್ ನಾಯ್ಕ್, ಅನಿಲ್ ಕೋಟ್ಯಾನ್, ರಮೇಶ್ ಪೂಜಾರಿ, ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ಮಂಡಲದ ಅಧ್ಯಕ್ಷ ಗುರುಪ್ರಸಾದ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಮೋಹನ್ ಶೆಟ್ಟಿ ಸಾಣೂರು ಕಾರ್ಯಕ್ರಮ ನಿರೂಪಿಸಿ, ಸತೀಶ್ ಮಡಿವಾಳ ವಂದಿಸಿದರು.

















































error: Content is protected !!
Scroll to Top