ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ – ಇನ್ನೋರ್ವ ಆರೋಪಿ ಪೊಲೀಸ್‌ ವಶಕ್ಕೆ

ಮಂಗಳೂರು : ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ.
ಪ್ರಕರಣ ಸಂಬಂಧ ಈವರೆಗೆ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ.

ಹಳೆ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆಸಿದ್ದಾರೆ ಎನ್ನುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ನಿಖರ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ. ಪೂರ್ವದ್ವೇಷದ ಹತ್ಯೆಯೋ, ಕೋಮುದ್ವೇಷದ ಹತ್ಯೆಯೋ, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರದ ಹತ್ಯೆಯೋ ಅನ್ನೋದು ಖಚಿತಗೊಂಡಿಲ್ಲ. ಬಂಟ್ವಾಳ ಡಿವೈಎಸ್‌ಪಿ ವಿಜಯ್ ಪ್ರಸಾದ್ ನೇತೃತ್ವದಲ್ಲಿ 5 ವಿಶೇಷ ತಂಡಗಳಿಂದ ತನಿಖೆ ನಡೆಯುತ್ತಿದೆ.



































































































error: Content is protected !!
Scroll to Top