ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ದೆಹಲಿ : ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಜು. 1ರಿಂದಲೇ ಜಾರಿಗೆ ಬರಲಿದೆ.

ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1723.50 ರೂ.ಗಳ ಬದಲಿಗೆ 1665 ರೂ.ಗಳಿಗೆ ಲಭ್ಯವಿರುತ್ತದೆ. ಅಂದರೆ, ಇಲ್ಲಿ 58.50 ರೂ.ಗಳ ಇಳಿಕೆ ಕಂಡುಬಂದಿದೆ. ಕೋಲ್ಕತ್ತಾದಲ್ಲಿ, ಇಂದಿನಿಂದ ವಾಣಿಜ್ಯ ಸಿಲಿಂಡರ್ 1769 ರೂ.ಗಳಿಗೆ ಲಭ್ಯವಿರುತ್ತದೆ. 14.2 ಕೆಜಿ ದೇಶೀಯ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಏಪ್ರಿಲ್‌ನಲ್ಲಿ 41 ರೂ.ಗಳಷ್ಟು ಬೆಲೆ ಕಡಿಮೆ ಮಾಡಲಾಗಿತ್ತು. ನಂತರ ಮೇ ತಿಂಗಳಲ್ಲಿ 14.50 ರೂ. ಮತ್ತು ಜೂನ್‌ನಲ್ಲಿ 24 ರೂ.ಗಳಷ್ಟು ಇಳಿಕೆ ಮಾಡಲಾಗಿತ್ತು.



































































































error: Content is protected !!
Scroll to Top