ರಾಜ್ಯ ಸರಕಾರದ ವಿರುದ್ಧ ಒಳ ಮೀಸಲಾತಿ ಅಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ

ಬೆಂಗಳೂರು : ರಾಜ್ಯ ಸರಕಾರದ ವಿರುದ್ಧ ಒಳ ಮೀಸಲಾತಿ ಅಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದ್ದು, ಆಗಸ್ಟ್ 1 ರಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ಜುಲೈ ಅಂತ್ಯದೊಳಗೆ ರಾಜ್ಯ ಸರಕಾರ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ತರಲು ವಿಫಲವಾಗಿದ್ದೇ ಆದರೆ, ಆಗಸ್ಟ್ 1 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಆಂಧ್ರಪ್ರದೇಶ, ತೆಲಂಗಾಣ ಮತ್ತು ಹರಿಯಾಣ ಒಳ ಮೀಸಲಾತಿಯನ್ನು ಜಾರಿಗೆ ತಂದಿವೆ. ಆದರೆ, ಸಿದ್ಧರಾಮಯ್ಯ ಸರಕಾರ ಅದನ್ನು ಜಾರಿಗೆ ತರುವ ಬದಲು ಮತ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ. ಜನರಲ್ಲಿ ಗೊಂದಲ ಸೃಷ್ಟಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಆರೋಪಿಸಿದರು.











































































error: Content is protected !!
Scroll to Top