`ರಕ್ತಕ್ಕೆ ರಕ್ತವೇ ಬೇಕು’ ಎಂದು ಇನ್ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿದ್ದ ಕಾರ್ಕಳದ ಯುವಕ ಅರೆಸ್ಟ್

ಕಾರ್ಕಳ : ರಕ್ತಕ್ಕೆ ರಕ್ತವೇ ಬೇಕು ಎಂದು ಇನ್ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿದ್ದ ಯುವಕನನ್ನು ವಿಶೇಷ ಕಾರ್ಯಪಡೆ (ಎಸ್‍ಎಎಫ್-Special Action Force) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ಆಶಿಕ್ ಎಸ್. ಕೋಟ್ಯಾನ್ ಬಂಧಿತ ಯುವಕ.

ಈತ ತನ್ನ ಇನ್ಸ್ಟಾಗ್ರಾಮ್‍ನಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ. ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ತಕ್ಕೆ ರಕ್ತವೇ ಉತ್ತರವಾಗಬೇಕು. ಜೀವಕ್ಕೆ ಜೀವನೇ ಬೇಕು ಎಂದು ಮಾರಕಾಯುಧಗಳ ಚಿಹ್ನೆ ಬಳಸಿ ಸ್ಟೇಟಸ್ ಹಾಕಿದ್ದ. ಈ ಹಿನ್ನಲೆ ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಬಿಎನ್‍ಎಸ್ ಕಲಂ 196, 353 (2), 351 (3)ರ ಅಡಿ ಎಫ್‍ಐಆರ್ ದಾಖಲಾಗಿದೆ. ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.











































error: Content is protected !!
Scroll to Top