ಕೆಪಿಎಸ್‌ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ಸೌಲಭ್ಯ – ರಾಜ್ಯ ಸರಕಾರ ಘೋಷಣೆ

ಬೆಂಗಳೂರು : ಕರ್ನಾಟಕ ಪಬ್ಲಿಕ್‌ ಸ್ಕೂಲ್‌ (ಕೆಪಿಎಸ್)ನಲ್ಲಿ ಎಲ್​​ಕೆಜಿ ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಉಚಿತ ಸಾರಿಗೆ ಸೌಲಭ್ಯವನ್ನು ಘೋಷಿಸಿದೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸರಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರಕಾರ ಬದ್ಧ! ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್​ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರಕಾರ ತೀರ್ಮಾನಿಸುವ ಮೂಲಕ ಸರಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸರಕಾರಿ ಶಾಲೆ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ, ಕೆಪಿಎಸ್​​ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಎಲ್​ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಉಚಿತ ಬಸ್‌ ವ್ಯವಸ್ಥೆ, ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರಕಾರದಿಂದ ಮಹತ್ವದ ಚಿಂತನೆ ಹಾಗೂ ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆ ಎಂದು ಅವರು ತಮ್ಮ ಪೋಸ್ಟ್‌ನಲಿ ಹಾಕಿದ್ದಾರೆ.









































































































error: Content is protected !!
Scroll to Top