ಜು. 27 : ಉದಯ್‌ ಎಸ್.‌ ಕೋಟ್ಯಾನ್‌ ಅವರಿಗೆ ಹುಟ್ಟೂರ ಅಭಿನಂದನೆ

ಕಾರ್ಕಳ : ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನಿ. ಇದರ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಉದಯ್‌ ಎಸ್.‌ ಕೋಟ್ಯಾನ್‌ ಅವರಿಗೆ ಕೊಳಕೆ ಇರ್ವತ್ತೂರು ಅಭಿನಂದನಾ ಸಮಿತಿ ವತಿಯಿಂದ ಜು. 27ರಂದು ಇರ್ವತ್ತೂರು ಗರಡಿ ಬಳಿ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಆರ್ಯ ಈಡಿಗರ ಮಹಾಸಂಸ್ಥಾನ ಸೋಲೂರು ಮಠದ ಪೀಠಾಧ್ಯಕ್ಷ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಮತ್ತು ಮಂಗಳೂರು ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.‌ ರಾಜೇಂದ್ರ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಭಿನಂದನಾ ಸಮಿತಿ ಅಧ್ಯಕ್ಷ ಗಣೇಶ್‌ ಶೆಟ್ಟಿ ಗೋವಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀರಾಮ ಭಟ್‌, ಉದ್ಯಮಿಗಳಾದ ರಮೇಶ್‌ ಶೆಟ್ಟಿ, ವಿಠಲ ಅಮೀನ್‌ ಇರ್ವತ್ತೂರು, ಸದಾನಂದ ಕೋಟ್ಯಾನ್‌ ಮುಂಬೈ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 9.30ರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುರೇಶ್‌ ಸಾಲಿಯಾನ್‌ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಕುಸಾಲ್ದ ಗುರಿಕಾರೆ ದಿನೇಶ್‌ ಕೋಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹಾಸ್ಯ ಕಲಾವಿದರ ಸಮಾಗಮದೊಂದಿಗೆ ಯಕ್ಷ ತೆಲಿಕೆ – ಯಕ್ಷ ಹಾಸ್ಯ ವೈಭವ ಪ್ರದರ್ಶನಗೊಳ್ಳಲಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.











































































error: Content is protected !!
Scroll to Top