ಡ್ರಗ್ಸ್‌ ಜಾಲದ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ – ಡ್ರಗ್‌ ಪೆಡ್ಲರ್ ವೈದ್ಯನ ಬಂಧನ

ಮಂಗಳೂರು : ಡ್ರಗ್ಸ್ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು ಪೊಲೀಸರು ಬೀದರ್ ಮೂಲದ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್ ಬಂಧಿತ ವೈದ್ಯ.
ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಿಂದ ಮಂಗಳೂರಿಗೆ ಡ್ರಗ್ಸ್ ಪೂರೈಕೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿಗಳನ್ನೇ ಗುರಿಯಾಗಿಸಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ಪ್ರಕರಣ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ, ವೈದ್ಯ ಪ್ರಜ್ವಲ್ ಪೀಣ್ಯಾಸ್ ಕಿಂಗ್​ಪಿನ್ ಎಂಬುದು ಗೊತ್ತಾಗಿದೆ. ಪ್ರಜ್ವಲ್ ಪೀಣ್ಯಾಸ್ ಈ ಹಿಂದೆ ಮಂಗಳೂರಿನ ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ.

ಮಂಗಳೂರಿನಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರು ಜನರ ಬಂಧನವಾಗಿತ್ತು. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಮಂಗಳೂರಿಗೆ ಈ ಜಾಲ ಡ್ರಗ್ಸ್ ಪೂರೈಕೆ ಮಾಡುತ್ತಿತ್ತು. ಮಹಾರಾಷ್ಟ್ರಕ್ಕೆ ಸೇರಿದ ಇಬ್ಬರು ಮಧ್ಯಪ್ರದೇಶಕ್ಕೆ ಸೇರಿದ ಒಬ್ಬರನ್ನ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಬೀದರ್ ಮೂಲದ ವೈದ್ಯನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.













































































error: Content is protected !!
Scroll to Top