ಕಾರ್ಕಳ : 21ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಮುನಿಯಾಲು ಲಯನ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು. 11ರಂದು ಮುನಿಯಾಲು ಮಾರಿಗುಡಿಯಲ್ಲಿ ನಡೆಯಿತು. ನೂತನ ಅಧ್ಯಕ್ಷ ಸಂದೇಶ್ ಶೆಟ್ಟಿ ಅವರಿಗೆ ರಂಜನ್ ಕಲ್ಕುರ (PMJf) ಅವರು ಪದಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ನಿರ್ಗಮನ ಅಧ್ಯಕ್ಷ ಭುಜಂಗ ಶೆಟ್ಟಿ, ಪ್ರಾಂತೀಯ ಅಧ್ಯಕ್ಷ ಗುರುಪ್ರಸಾದ್ ಶೆಟ್ಟಿ, ವಲಯ ಅಧ್ಯಕ್ಷ ಸತೀಶ್ ಶೆಟ್ಟಿ, ಕಾರ್ಯದರ್ಶಿಗಳಾದ ಗೋಪಿನಾಥ ಭಟ್ ಮತ್ತು ಅಶೋಕ್ ಶೆಟ್ಟಿ ಅವರು ಉಪಸಿತರಿದ್ದರು.
ಮುನಿಯಾಲು ಲಯನ್ಸ್ ಕ್ಲಬ್ ಪದಗ್ರಹಣ








































