ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ (87) ಅವರು ಜು. 14ರಂದು ನಿಧನ ಹೊಂದಿದರು.  ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.

ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.









































































































error: Content is protected !!
Scroll to Top