ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನೀರೆ ಗ್ರಾ. ಪಂ. ನವರು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಿರುವ ಶೌಚಾಲಯವನ್ನು ಜು. 14 ಉದ್ಘಾಟನೆಗೊಳಿಸಲಾಯಿತು. ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಂಕಿತ ನಾಯಕ್, ಕಾಂಟ್ರಾಕ್ಟರ್ ಅಮೀರ್ ಹುಸೇನ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಂತೋಷ ವಾಗ್ಲೆ, ಪಂಚಾಯತ್ ಸದಸ್ಯರಾದ ಹೈದರಾಲಿ ಮತ್ತು ಯಶೋದ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೈಲೂರು ಕಾಲೇಜಿನಲ್ಲಿ ಶೌಚಾಲಯ ಉದ್ಘಾಟನೆ



















