ಯೆಮನ್‌ನಲ್ಲಿ ಕೇರಳದ ನರ್ಸ್​ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆ ಮುಂದೂಡಿಕೆ

ದೆಹಲಿ : ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.

ಯೆಮನ್‌ನಲ್ಲಿ ನರ್ಸ್‌ ಆಗಿದ್ದ ಕೇರಳದ 37 ವರ್ಷದ ನಿಮಿಷಾ ಪ್ರಿಯಾ ತನ್ನ ಬ್ಯುಸಿನೆಸ್ ಪಾರ್ಟ್ನರ್​ ಅಬ್ದೋ ಮಹ್ದಿಯನ್ನು ಕೊಲೆ ಮಾಡಿರುವ ಆರೋಪದ ಮೇಲೆ ಗಲ್ಲು ಶಿಕ್ಷೆಗೆ ಗುರಿಯಾಗಿ 2017 ರಿಂದ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ. ಪ್ರಕರಣ ಕುರಿತು ಪ್ರಸಿದ್ಧ ಸೂಫಿ ವಿದ್ವಾಂಸ ಶೇಖ್ ಹಬೀಬ್ ಉಮರ್ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆದಿತ್ತು. ಸಭೆಯಲ್ಲಿ ಯೆಮೆನ್ ಸರಕಾರದ ಪ್ರತಿನಿಧಿಗಳು, ನ್ಯಾಯಮೂರ್ತಿಗಳು ಮತ್ತು ಮೃತ ತಲಾಲ್ ಅವರ ಸಹೋದರ ಭಾಗವಹಿಸಿದ್ದರು.

ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಮಾತುಕತೆಗಳು ನಡೆಯುತ್ತಿದೆ. ಯೆಮೆನ್‌ನಲ್ಲಿ ಶರಿಯಾ ಕಾನೂನಿನಡಿಯಲ್ಲಿ, ಬ್ಲಡ್ ಮನಿ ಹತ್ಯೆಯಾದ ವ್ಯಕ್ತಿಯ ಕುಟುಂಬಕ್ಕೆ ನೀಡಲಾಗುವ ಕಾನೂನುಬದ್ಧವಾದ ಆರ್ಥಿಕ ಪರಿಹಾರವಾಗಿದೆ. ನಿಮಿಷಾ ಕಡೆಯವರು 8.6 ಕೋಟಿ ರೂ. ನೀಡಲು ಸಿದ್ಧರಿದ್ದರು. ಆದರೆ ಮೃತ ವ್ಯಕ್ತಿಯ ಕಡೆಯವರು ಒಪ್ಪಿಕೊಂಡಿರಲಿಲ್ಲ. ಮಾತುಕತೆಗಳನ್ನು ಸುಗಮಗೊಳಿಸಲು ಇಲ್ಲಿನ ಮುಸ್ಲಿಯಾರ್ ಅವರ ಪ್ರಧಾನ ಕಚೇರಿಯಲ್ಲಿ, ಪ್ರತ್ಯೇಕ ಕಚೇರಿಯನ್ನು ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣ
ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ ಪ್ರಿಯಾ, 2011ರಲ್ಲಿ ತನ್ನ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಯೆಮೆನ್‌ಗೆ ತೆರಳಿದರು. ಯೆಮೆನ್‌ನಲ್ಲಿ ಕ್ಲಿನಿಕ್‌ ಪ್ರಾರಂಭಿಸಲು ಸಹಾಯ ಮಾಡುವುದಾಗಿ ತಲಾಲ್ ಅಬ್ದೋ ಮಹ್ದಿ ಭರವಸೆ ನೀಡಿದಾಗ ಆಕೆ ಆತನ ಜೊತೆ ಒಡನಾಟ ಬೆಳೆಸಿಕೊಂಡಿದ್ದರು. ಯೆಮೆನ್ ವ್ಯವಹಾರ ಕಾನೂನಿನ ಪ್ರಕಾರ ಅಲ್ಲಿ ಬ್ಯುಸಿನೆಸ್ ಪ್ರಾರಂಭಿಸಲು ವಿದೇಶಿಯೊಬ್ಬ ಸ್ಥಳೀಯರೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ, ನಿಮಿಷಾ ತಲಾಲ್ ಜೊತೆ 2015ರಲ್ಲಿ ಸನಾದಲ್ಲಿ ತನ್ನ ಕ್ಲಿನಿಕ್ ಪ್ರಾರಂಭಿಸಿದರು. ಕೆಲವು ಸಮಯದ ಬಳಿಕ ನಿಮಿಷಾ ಪ್ರಿಯಾ ಮತ್ತು ತಲಾಲ್ ಜತೆ ಮನಸ್ತಾಪ ಉಂಟಾಗಿತ್ತು. ಆತನ ವಿರುದ್ಧ ನಿಮಿಷಾ ದೂರು ಕೂಡ ದಾಖಲಿಸಿದ್ದರು. ಅದರಂತೆ 2016ರಲ್ಲಿ ಆತನನ್ನು ಬಂಧಿಸಲಾಯಿತು. ಜೈಲಿನಿಂದ ಬಿಡುಗಡೆಯಾದ ಬಳಿಕ ಆತ ಆಕೆಗೆ ಬೆದರಿಕೆ ಹಾಕುತ್ತಲೇ ಇದ್ದ, ಅಲ್ಲದೆ ತಲಾಲ್ ನಿಮಿಷಾರ ಪಾಸ್‌ಪೋರ್ಟ್ ಅನ್ನು ಸಹ ತೆಗೆದುಕೊಂಡಿದ್ದ ಎನ್ನಲಾಗಿದೆ. ತನ್ನ ಪಾಸ್‌ಪೋರ್ಟ್‌ ಪಡೆಯಲು ಆತನಿಗೆ 2017ರಲ್ಲಿ ನಿದ್ದೆ ಬರುವ ಚುಚ್ಚುಮದ್ದು ನೀಡಿದ್ದರು. ಇದರ ಡೋಸ್‌ ಹೆಚ್ಚಾಗಿ ಆತ ಅಸುನೀಗಿದ್ದ. ನಂತರ ದೇಶ ಬಿಡಲು ಮುಂದಾಗಿದ್ದ ನಿಮಿಷಾ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದರು. 2018ರಲ್ಲಿ ಅವರ ಮೇಲೆ ಕೊಲೆ ಆರೋಪ ಹೊರಿಸಲಾಯಿತು. 2020ರಲ್ಲಿ ಯೆಮೆನ್ ವಿಚಾರಣಾ ನ್ಯಾಯಾಲಯವು ನಿಮಿಷಾಗೆ ಮರಣದಂಡನೆ ವಿಧಿಸಿತು. ದೇಶದ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ 2023ರಲ್ಲಿ ಈ ತೀರ್ಪನ್ನು ಎತ್ತಿ ಹಿಡಿಯಿತು.













































\















error: Content is protected !!
Scroll to Top