ಆಕ್ಸಿಯಂ-4 : ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ಶುಭಾಂಶು ಶುಕ್ಲಾ

ದೆಹಲಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಇಂದು ಭೂಮಿಗೆ ಬಂದಿಳಿದಿದ್ದಾರೆ. 18 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದು ಇಂದು ಮಧ್ಯಾಹ್ನ 3 ಗಂಟೆಗೆ ಶುಭಾಂಶು ಶುಕ್ಲಾ ಮತ್ತು ಇತರ ಮೂವರಿದ್ದ ಡ್ರ್ಯಾಗನ್‌ ಗ್ರೇಸ್‌ ಬಾಹ್ಯಾಕಾಶ ನೌಕೆಯು ಭೂಮಿಗಿಳಿದಿದೆ.

ಜೂ. 25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ ಅಂತರಿಕ್ಷ ಯಾನಕ್ಕೆ ತೆರಳಿದ್ದರು. 8 ಗಂಟೆಗಳ ಪ್ರಯಾಣದ ನಂತರ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಜೂನ್ 26 ರಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕ್ ಮಾಡಿತು. ಆದಾಗ್ಯೂ, ಈ ಮಿಷನ್ 14 ದಿನಗಳದ್ದಾಗಿತ್ತು. ಈಗ ಗಗನಯಾತ್ರಿಗಳ ಮರಳುವಿಕೆ ನಾಲ್ಕು ದಿನಗಳ ವಿಳಂಬವಾಗಿದೆ. ಜುಲೈ 6 ರಂದು, ಶುಭಾಂಶು ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಕೆಲವು ಚಿತ್ರಗಳನ್ನು ಬಿಡುಗಡೆ ಮಾಡಿದ್ದರು.

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಸಂಸ್ಥೆ ಇಸ್ರೋ ನಡುವಿನ ಒಪ್ಪಂದದಡಿಯಲ್ಲಿ, ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಈ ಕಾರ್ಯಾಚರಣೆಗೆ ಆಯ್ಕೆ ಮಾಡಲಾಯಿತು. 41 ವರ್ಷಗಳ ಹಿಂದೆ, ಭಾರತದ ರಾಕೇಶ್ ಶರ್ಮಾ 1984 ರಲ್ಲಿ ಸೋವಿಯತ್ ಒಕ್ಕೂಟದ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ್ದರು.





























































































error: Content is protected !!
Scroll to Top