ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲು

ಉಡುಪಿ : ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಜು. 15ರಂದು ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್ ಖಾರ್ವಿ (36) ನೀರುಪಾಲಾದ ಮೀನುಗಾರರು.

ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆ ವಾಪಸ್ ಆಗುವಾಗ ದೋಣಿ ಮಗುಚಿದ್ದು, ಈ ವೇಳೆ ಓರ್ವ ನೀರಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ಕೂಡ ನೀರುಪಾಲಾಗಿದ್ದಾರೆ. ಸದ್ಯ ನೀರುಪಾಲಾದ ಮೀನುಗಾರರಿಗೆ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ.









































error: Content is protected !!
Scroll to Top