ಉಡುಪಿ ಸೇರಿದಂತೆ 14 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.































































error: Content is protected !!
Scroll to Top