ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕಾರ್ಕಳ : 2025-26ನೇ ಸಾಲಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಂದ ಸಹಾಯಧನ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪಹಣಿ ಪ್ರತಿ, ಆಧಾರ್‍ ಪ್ರತಿ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಕಾರ್ಕಳ ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಔಷಧಿ ಖರೀದಿಗೆ ಸಹಾಯಧನ
ರೈತರು ತಮ್ಮ ಅಡಿಕೆ ತೋಟಗಳಲ್ಲಿ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಶಿಫಾರಸ್ಸು ಮಾಡಲಾದ ರಾಸಾಯನಿಕ ಔಷಧಿಗಳನ್ನು (ಪ್ರೊಪಿಕೋನೋಜಾಲ್, ಟೆಬೋಕೋನೋಜಾಲ್, ಪ್ರೋಪಿನೆಬ್ ಹಾಗೂ ಇತರೇ) ಖರೀದಿಸಿದಲ್ಲಿ ಸಹಾಯಧನಕ್ಕಾಗಿ ತೋಟಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇಲಾಖೆ ವತಿಯಿಂದ ಪ್ರತಿ ಎಕರೆಗೆ 600 ರೂಪಾಯಿಯಂತೆ ಗರಿಷ್ಠ 5 ಎಕರೆಗಳಿಗೆ ಸಹಾಯಧನ ಪಡೆಯಲು ಅವಕಾಶವಿದೆ. ರೈತರು ಪಹಣಿ ಪ್ರತಿ, ಆಧಾರ್‍ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಅಧಿಕೃತ ಮಾರಾಟಗಾರರಿಂದ ರಾಸಾಯನಿಕ ಖರೀದಿಸಿದ ಬಿಲ್ಲುನೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಹಾಯಧನವು ಎಪ್ರಿಲ್- 2025ರ ಅನಂತರ ಖರೀದಿಸಲಾದ ರಾಸಾಯನಿಕಗಳಿಗೆ ಮಾತ್ರ ದೊರೆಯಲಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ ಬಿ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.









































































































error: Content is protected !!
Scroll to Top