ಕಾರ್ಕಳ ಪುರಸಭೆ – ತಾಲೂಕು ಕಚೇರಿಗೆ ಲೋಕಾಯುಕ್ತ ದಿಢೀರ್ ಭೇಟಿ

ಕಾರ್ಕಳ‌ : ಕಾರ್ಕಳ ಪುರಸಭೆ ಹಾಗೂ ತಾಲೂಕು ಕಚೇರಿಗೆ ಜು. 18ರಂದು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು. ಈ ವೇಳೆ ಕಡತ ವಿಲೇವಾರಿ ವಿಳಂಬ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜನನ-ಮರಣ ಪ್ರಮಾಣ ಪತ್ರ, ಖಾತಾ ವರ್ಗಾವಣೆ, ಉದ್ದಿಮೆ ಪರವಾನಗಿ ಹಾಗೂ ಇತರೆ ಕಾರ್ಯಗಳಲ್ಲಿ ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ಆಗುತ್ತಿರುವ ವಿಳಂಬದ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪುರಸಭೆ ಕಚೇರಿಯ ಎಲ್ಲ ವಿಭಾಗಗಳ ಕಡತಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ.
ತಾಲೂಕು ಕಚೇರಿಯ ರೆಕಾರ್ಡ್ ರೂಂಗೂ ಲೋಕಾಯುಕ್ತ ತಂಡ ಭೇಟಿ ನೀಡಿದೆ. ಕಳೆದ ಹಲವಾರು ತಿಂಗಳಿಂದ ಬಾಕಿ ಉಳಿದಿದ್ದ ಕಡತಗಳು ಪತ್ತೆಯಾಗಿದೆ. ಕಡತ ವಿಳಂಬಕ್ಕೆ ಅಧಿಕಾರಿ ಸಿಬಂದಿಯಿಂದ ಕಾರಣ ಕೇಳಿದರು. ಸಾರ್ವಜನಿಕರ ಕೆಲಸ ಕಾರ್ಯಗಳು ಪಾರದರ್ಶಕವಾಗಿ, ತ್ವರಿತವಾಗಿ ಮಾಡಿಕೊಡುವಂತೆ ಲೋಕಾಯುಕ್ತ ಅಧಿಕಾರಿಗಳು ತಾಕೀತು ಮಾಡಿದ್ದರು.









































































































error: Content is protected !!
Scroll to Top