ನಿಟ್ಟೆ ರೋಟರಿ ಕ್ಲಬ್ – ಕ್ಯಾನ್ಸರ್ ಕುರಿತು ಮಾಹಿತಿ ಕಾರ್ಯಾಗಾರ

ಕಾರ್ಕಳ : ನಿಟ್ಟೆ ರೋಟರಿ ಕ್ಲಬ್‌ನ ವತಿಯಿಂದ ಆರೋಗ್ಯ ಪರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮತ್ತು ಮುನ್ನೆಚ್ಚರಿಕಾ ಕ್ರಮಗಳು ಎಂಬ ವಿಷಯದ ಕುರಿತು ಜು. 17ರಂದು ಎನ್‌ಎಂಎಎಂಐಟಿ (NMAMIT)ಯಲ್ಲಿ ಮಾಹಿತಿ ಕಾರ್ಯಾಗಾರ ಜರುಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಿಟ್ಟೆ ಮೆಡಿಕಲ್ ಸೆಂಟರ್‌ನ ಆರೋಗ್ಯಾಧಿಕಾರಿ ಡಾ. ಪ್ರಕಾಶ್ ಶೆಟ್ಟಿ ಕ್ಯಾನ್ಸರ್‌ನ ಸಾಮಾನ್ಯ ಲಕ್ಷಣಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ನಿಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಡಾ. ರಘುನಂದನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಷಬ್‌ನ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯದರ್ಶಿ ಶೈಲಜ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.







































error: Content is protected !!
Scroll to Top