ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಪ್ರಮಾಣ ವಚನ ಬೋಧಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪಾಲ್ಗೊಂಡು, ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಶುಭ ಕೋರಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಭಾಪತಿಬಸವರಾಜ ಹೊರಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ನ್ಯಾ.ವಿಭು ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್‌ 17ರಂದು ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್‌ 18ರಂದು ಕಾಯಂಗೊಂಡಿದ್ದರು.









































































































error: Content is protected !!
Scroll to Top