ಆ. 11 ರಿಂದ 22ರವರಗೆ ವಿಧಾನ ಮಂಡಲದ ಮುಂಗಾರು ಅಧಿವೇಶನ

ಬೆಂಗಳೂರು : ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆ. 11ರಂದು ಆರಂಭಗೊಂಡು ಆ. 22ರವರೆಗೆ ನಡೆಯಲಿದೆ. ಈ ಬಗ್ಗೆ ರಾಜ್ಯ ಸರಕಾದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ. ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.

ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಆಗಸ್ಟ್ 11ರಿಂದ 22ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಆ. 15ರಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಾರ್ವತ್ರಿಕ ರಜೆ ಹಾಗೂ ಮತ್ತೆರಡು ಶನಿವಾರ ಮತ್ತು ಭಾನುವಾರದ ರಜೆಗಳನ್ನು ಹೊರತುಪಡಿಸಿ 8 ದಿನಗಳ ಕಾಲ ಅಧಿವೇಶನ ನಡೆಯಲಿದೆ.































































































error: Content is protected !!
Scroll to Top