ಧರ್ಮಸ್ಥಳ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ಸರಕಾರ

ಪ್ರಣವ ಮೊಹಾಂತಿ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳ ತಂಡ

ಬೆಂಗಳೂರು : ಧರ್ಮಸ್ಥಳ ಅರಣ್ಯ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತಿಡಲಾಗಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟಿದ್ದೆ ಎಂದು ಪೊಲೀಸರ ಬಳಿ ಹೇಳಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ. ಎನ್. ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಅವರು ತಂಡದ ಸದಸ್ಯರಾಗಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ ಎಂದು ಶನಿವಾರ ಹೊರಡಿಸಲಾದ ಸರಕಾರಿ ಆದೇಶದಲ್ಲಿ ತಿಳಿಸಲಾಗಿದೆ.



































































































error: Content is protected !!
Scroll to Top