ಹಿಂದೆ ಸರಿದಿರುವಂತಹ ಬೆಳವಣಿಗೆ ನಡೆದಿಲ್ಲ – ಗೃಹ ಸಚಿವರ ಸ್ಪಷ್ಟನೆ
ಬೆಂಗಳೂರು : ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಶವಗಳ ಹೂತಿಟ್ಟ ಪ್ರಕರಣ ಸಂಬಂಧ ತನಿಖೆಗಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ಇಬ್ಬರು ಐಪಿಎಸ್ ಅಧಿಕಾರಿಗಳು ಹಿಂದೆ ಸರಿಯುವ ಕುರಿತು ವದಂತಿ ಹರಿದಾಡುತ್ತಿದೆ.
ಡಾ. ಪ್ರಣವ್ ಮೊಹಂತಿ ನೇತೃತ್ವದಲ್ಲಿ ರಚನೆಯಾದ ಎಸ್‌ಐಟಿಯಲ್ಲಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಇದ್ದಾರೆ. ಇದೀಗ ಇದರಲ್ಲಿ ಅನುಚೇತ್ ಮತ್ತು ಸೌಮ್ಯಲತಾ ಹೊರಬರಲು ಮುಂದಾಗಿದ್ದು, ಈ ಸಂಬಂಧ ರಾಜ್ಯ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆಯಿದೆ. ವೈಯಕ್ತಿಕ ಕಾರಣ ಮುಂದಿಟ್ಟುಕೊಂಡು ತನಿಖಾ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಗೃಹ ಸಚಿವರ ಸ್ಪಷ್ಟನೆ
ಐಪಿಎಸ್ ಅಧಿಕಾರಿಗಳು ತನಿಖೆಯಿಂದ ಹಿಂದೆ ಸರಿದಿರುವಂತಹ ಯಾವುದೇ ಬೆಳವಣಿಗ ನಡೆದಿಲ್ಲ. ಸರಕಾರಕ್ಕೆ ಈ ಬಗ್ಗೆ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ ಎಂದು ವರದಿಯಾಗಿದೆ.



















