ಹೆಬ್ರಿ ಕಸಾಪ : ಕನ್ನಡದ ಕಂದ ಕಾರ್ಯಕ್ರಮ- ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಹೆಬ್ರಿ : ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕವು ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹೆಬ್ರಿ ಇಲ್ಲಿ ಕನ್ನಡದ ಕಂದ ಕಾರ್ಯಕ್ರಮದಡಿಯಲ್ಲಿ ಜು.19ರಂದು ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ ಪ್ರಬಂಧ, ಭಾಷಣ ಹಾಗೂ ಕವನ ರಚನಾ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಂತಾ ಎಸ್. ರಾವ್ ಅವರ ನೆರಳು-ಬೆಳಕು ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿಯಲ್ಲಿ ಕನ್ನಡದಲ್ಲಿ ಪೂರ್ಣ ಪಡೆದ ಅಕ್ಷತಾ ಸಂತಗೇರಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಎಸ್.ಡಿ ಎಂ.ಸಿ ಅಧ್ಯಕ್ಷ ತಿಪ್ಪೇಸ್ವಾಮಿ ಎಚ್.ಎಂ, ಶಾಲಾ ಮುಖ್ಯ ಶಿಕ್ಷಕ ಶರತ್ ಶೆಟ್ಟಿ, ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀನಿವಾಸ ಭಂಡಾರಿ, ಶಾಲೆಯ ಹಳೆ ವಿದಾರ್ಥಿ ಹಾಗೂ ಉದ್ಯಮಿ ಯೋಗೀಶ ಭಟ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ, ಕೋಶಾಧಿಕಾರಿ ಮನೋಹರ ಪಿ., ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಸೌಮ್ಯ ಆಚಾರ್ಯ, ಹೆಬ್ರಿ ತಾಲೂಕು ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ| ಪ್ರವೀಣ ಕುಮಾರ್ ಎಸ್., ಮಂಜುನಾಥ ಕೆ. ಶಿವಪುರ, ಪದಾಧಿಕಾರಿಗಳಾದ ವೀಣಾ ಆರ್. ಭಟ್, ಸುರೇಶ ಭಂಡಾರಿ, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.





























































































































error: Content is protected !!
Scroll to Top