ಕಾರ್ಕಳ : ಸ್ಟೆಮ್ ಇನೋವೇಷನ್ ಲೀಗ್ ಆಯೋಜಿಸಿದ್ದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಚಿನ್ಮಯ್ ಎ. ಶೆಟ್ಟಿ ಮತ್ತು ಅಭಿನವ್ ವಿ. ಎಸ್. ಭಾಗವಹಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಆ. 2ರಂದು ದೆಹಲಿಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆ ನಡೆಯಲಿದೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.
ವಿಜ್ಞಾನ ಮಾದರಿ ಸ್ಪರ್ಧೆ – ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ


















