ಕಾರ್ಕಳ : ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ ಜರಗಿತು. ಯುವ ಕೃಷಿಕ ಕಟಪಾಡಿ ನಾಗೇಶ್ ಕಾಮತ್ ಮತ್ತು ಪ್ರಥಮ್ ಕಾಮತ್ ಅವರು ಕೃಷಿ ಕುರಿತು ಮಾಹಿತಿ – ಕಾರ್ಯಾಗಾರ ನಡೆಸಿಕೊಟ್ಟರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯಕ್ರಮದ ನಿರ್ದೇಶಕ ಅನ್ನಪೂರ್ಣ ಕಾಮತ್, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಬ್ಬನಡ್ಕ, ಪೂರ್ವಾಧ್ಯಕ್ಷ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ಮಂಜುನಾಥ ಆಚಾರ್ಯ, ಸುರೇಶ್ ಅಬ್ಬನಡ್ಕ, ಯೋಗೀಶ್ ಆಚಾರ್ಯ, ಪ್ರದೀಪ್ ಸುವರ್ಣ, ವೀಣಾ ಆಚಾರ್ಯ, ಪದ್ಮಶ್ರೀ ಪೂಜಾರಿ, ವೀಣಾ ಪೂಜಾರಿ, ಪುಷ್ಪ ಕುಲಾಲ್, ಸುಲೋಚನಾ ಕೋಟ್ಯಾನ್ ಮೊದಲಾದವರು ಈ ಸಂದರ್ಭದಲ್ಲಿದ್ದರು.
ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ಕೃಷಿ ಕಾರ್ಯಾಗಾರ





















