ಧರ್ಮಸ್ಥಳ ಪ್ರಕರಣ – ಎಸ್‌ಐಟಿ ತಂಡಕ್ಕೆ 20 ಹೆಚ್ಚುವರಿ ಅಧಿಕಾರಿಗಳ ನೇಮಕ

ಮಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ರಚಿಸಿರುವ ಪ್ರಣವ್ ಮೊಹಾಂತಿ ನೇತೃತ್ವದ ಎಸ್‌ಐಟಿ ತಂಡಕ್ಕೆ ಇದೀಗ ಹೆಚ್ಚುವರಿಯಾಗಿ 20 ಅಧಿಕಾರಿಗಳ ನೇಮಕ ಮಾಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಡಿಜಿಪಿ ಆದೇಶ ಹೊರಡಿಸಿದ್ದಾರೆ.

ಹೆಚ್ಚುವರಿಯಾಗಿ ನೇಮಕಗೊಂಡ ಅಧಿಕಾರಿಗಳು
ಮಂಗಳೂರು ಡಿಸಿಆರ್‌ಇ ಎಸ್ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ ಎ.ಸಿ. ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್‌ ಇ.ಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಕೆ. ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ ಗೌಡ, ಉಡುಪಿ -ಬೈಂದೂರು ಇನ್ಸ್‌ಪೆಕ್ಟರ್‌ ಪಿ.ಡಿ ಸವಿತ್ರು ತೇಜ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಆರ್. ಸುಹಾಸ್, ಉತ್ತರ ಕನ್ನಡ ಮುಂಡಗೋಡು ಸಬ್‌ಇನ್ಸ್‌ಪೆಕ್ಟರ್‌ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಸ್ಕಾಂ ಸಬ್‌ಇನ್ಸ್‌ಪೆಕ್ಟರ್‌ ಜೆ. ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹರೀಶ್‌ ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್‌ಕಾನ್‌ಸ್ಟೇಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್‌ಕಾನ್‌ಸ್ಟೇಬಲ್ ದೇವರಾಜ್.































































































error: Content is protected !!
Scroll to Top