ಜಗದೀಪ್‌ ಧನಕರ್‌ ರಾಜೀನಾಮೆ – ಉಪ ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಚುನಾವಣಾ ಆಯೋಗ

ದೆಹಲಿ : ಅನಾರೋಗ್ಯ ಕಾರಣ ನೀಡಿ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ಜು. 21ರಂದು ರಾಜೀನಾಮೆ ನೀಡಿದ್ದರು. ಆದ್ದರಿಂದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ ಪ್ರಾರಂಭಿಸಿದ್ದು, ಈ ಕುರಿತು ಅಧಿಕೃತ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಭಾರತದ ಚುನಾವಣಾ ಆಯೋಗವು, ವಿಧಿ 324ರ ಅಡಿಯಲ್ಲಿ, ಭಾರತದ ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ ನಡೆಸುವ ಅಧಿಕಾರವನ್ನು ಹೊಂದಿದೆ. ಭಾರತದ ಉಪಾಧ್ಯಕ್ಷರ ಹುದ್ದೆಗೆ ಚುನಾವಣೆಯನ್ನು ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ಕಾಯ್ದೆ, 1952 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು, ಅಂದ್ರೆ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ನಿಯಮಗಳು, 1974ರ ಮೂಲಕ ನಿಯಂತ್ರಿಸಲಾಗುತ್ತದೆ. ಅದರಂತೆ ಭಾರತೀಯ ಚುನಾವಣಾ ಆಯೋಗವು 2025ರ ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಿದೆ. ಈ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡ ಬಳಿಕ, ಚುನಾವಣಾ ವೇಳಾಪಟ್ಟಿಯನ್ನ ಆದಷ್ಟು ಬೇಗ ಘೋಷಿಸಲಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ ಹೇಳಿದೆ.

ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರಾವಧಿ 2027ರ ಆಗಸ್ಟ್ 10ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.































































































error: Content is protected !!
Scroll to Top